View this in:
English Devanagari Telugu Tamil Kannada Malayalam Gujarati Odia Bengali  |
Marathi Assamese Punjabi Hindi Samskritam Konkani Nepali Sinhala Grantha  |
This document is in ಶುದ್ಧ ಕನ್ನಡ with the right anusvaras marked. View this in ಸರಳ ಕನ್ನಡ, with simplified anusvaras for easier reading.

ಕನ್ನಡ ನಾದ ಗೀತೇ (ಜಯ ಭಾರತ ಜನನಿಯ ತನುಜಾತೆ)

ಜಯ ಭಾರತ ಜನನಿಯ ತನುಜಾತೆ,
ಜಯ ಹೇ ಕರ್ನಾಟಕ ಮಾತೆ!
ಜಯ ಸುನ್ದರ ನದಿ ವನಗಳ ನಾಡೇ,
ಜಯ ಹೇ ರಸೃಷಿಗಳ ಬೀಡೆ!
ಜಯ ಭಾರತ ಜನನಿಯ ತನುಜಾತೆ,
ಜಯ ಹೇ ಕರ್ನಾಟಕ ಮಾತೆ!

ಭೂದೇವಿಯ ಮಕುಟದ ನವಮಣಿಯೆ,
ಗನ್ಧದ ಚನ್ದದ ಹೊನ್ನಿನ ಗಣಿಯೆ;
ರಾಘವ ಮಧುಸೂದನರವತರಿಸಿದ
ಭಾರತ ಜನನಿಯ ತನುಜಾತೆ !
ಜಯ ಭಾರತ ಜನನಿಯ ತನುಜಾತೆ,
ಜಯ ಹೇ ಕರ್ನಾಟಕ ಮಾತೆ!

ಜನನಿಯ ಜೋಗುಳ ವೇದದ ಘೋಷ,
ಜನನಿಗೆ ಜೀವವು ನಿನ್ನಾವೇಶ,
ಹಸುರಿನ ಗಿರಿಗಳ ಸಾಲೇ,
ನಿನ್ನಯ ಕೊರಳಿನ ಮಾಲೆ,
ಕಪಿಲ ಪತಞ್ಜಲ ಗೌತಮ ಜಿನನುತ,
ಭಾರತ ಜನನಿಯ ತನುಜಾತೆ !

ಜಯ ಹೇ ಕರ್ನಾಟಕ ಮಾತೆ!
ಜಯ ಭಾರತ ಜನನಿಯ ತನುಜಾತೆ,
ಜಯ ಹೇ ಕರ್ನಾಟಕ ಮಾತೆ!

ಶಙ್ಕರ ರಾಮಾನುಜ ವಿದ್ಯಾರಣ್ಯ,
ಬಸವೇಶ್ವರ ಮಧ್ವರ ದಿವ್ಯಾರಣ್ಯ,
ರನ್ನ ಷಡಕ್ಷರಿ ಪೊನ್ನ,
ಪಮ್ಪ ಲಕುಮಿಪತಿ ಜನ್ನ
ಕುಮಾರವ್ಯಾಸರ ಮಙ್ಗಳಧಾಮ,
ಕವಿ ಕೋಗಿಲೆಗಳ ಪುಣ್ಯಾರಾಮ
ನಾನಕ ರಾಮಾ ನನ್ದ ಕಬೀರರ
ಜಯ ಹೇ ಕರ್ನಾಟಕ ಮಾತೆ!

ಜಯ ಭಾರತ ಜನನಿಯ ತನುಜಾತೆ,
ಜಯ ಹೇ ಕರ್ನಾಟಕ ಮಾತೆ!

ತೈಲಪ ಹೊಯ್ಸಳರಾಳಿದ ನಾಡೇ,
ಡಙ್ಕಣ ಜಕಣರ ನೆಚ್ಚಿನ ಬೀಡೆ
ಕೃಷ್ಣ ಶರಾವತಿ ತುಙ್ಗಾ,
ಕಾವೇರಿಯ ವರ ರಙ್ಗಾ
ಚೈತನ್ಯ ಪರಮಹಂಸ ವಿವೇಕರ,
ಭಾರತ ಜನನಿಯ ತನುಜಾತೆ !

ಜಯ ಹೇ ಕರ್ನಾಟಕ ಮಾತೆ!
ಜಯ ಭಾರತ ಜನನಿಯ ತನುಜಾತೆ,
ಜಯ ಹೇ ಕರ್ನಾಟಕ ಮಾತೆ!

ಸರ್ವ ಜನಾಙ್ಗದ ಶಾನ್ತಿಯ ತೋಟ,
ರಸಿಕರ ಕಙ್ಗಳ ಸೆಳೆಯುವ ನೋಟ
ಹಿನ್ದೂ ಕ್ರೈಸ್ತ ಮುಸಲ್ಮಾನ,
ಪಾರಸಿಕ ಜೈನರುದ್ಯಾನ,
ಜನಕನ ಹೋಲುವ ದೊರೆಗಳ ಧಾಮ,
ಗಾಯಕ ವೈಣಿಕರಾರಾಮ

ಕನ್ನಡ ನುಡಿ ಕುಣಿದಾಡುವ ಗೇಹ,
ಕನ್ನಡ ತಾಯಿಯ ಮಕ್ಕಳ ದೇಹ
ಭಾರತ ಜನನಿಯ ತನುಜಾತೆ,
ಜಯ ಹೇ ಕರ್ನಾಟಕ ಮಾತೆ
ಜಯ ಸುನ್ದರ ನದಿ ವನಗಳ ನಾಡೇ,
ಜಯ ಹೇ ರಸೃಷಿಗಳ ಬೀಡೆ!

ಜಯ ಭಾರತ ಜನನಿಯ ತನುಜಾತೆ,
ಜಯ ಹೇ ಕರ್ನಾಟಕ ಮಾತೆ!




Browse Related Categories: